ಕೀರ್ತನೆಗಳು 32:9 - ಪರಿಶುದ್ದ ಬೈಬಲ್9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 [ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.