Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:10 - ಪರಿಶುದ್ದ ಬೈಬಲ್‌

10 ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:10
23 ತಿಳಿವುಗಳ ಹೋಲಿಕೆ  

ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.


ಅಂತೆಯೇ ಯೆಹೋವನು ಜನರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆದ್ದರಿಂದ ಆ ಪಟ್ಟಣವನ್ನು ಕಟ್ಟಿ ಪೂರೈಸಲು ಅವರಿಗೆ ಸಾಧ್ಯವಾಗಲಿಲ್ಲ.


ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು.


ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು