Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:16 - ಪರಿಶುದ್ದ ಬೈಬಲ್‌

16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:16
32 ತಿಳಿವುಗಳ ಹೋಲಿಕೆ  

ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.


ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.


ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.


ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ. ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.


“ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ.


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


“‘ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧವೀರರಾಗಿದ್ದೇವೆ’ ಎಂದು ನೀವು ಹೇಳಲಾರಿರಿ.


ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.


ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.


ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು