Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:15 - ಪರಿಶುದ್ದ ಬೈಬಲ್‌

15 ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:15
12 ತಿಳಿವುಗಳ ಹೋಲಿಕೆ  

ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.


ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.


ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.


ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು