ಕೀರ್ತನೆಗಳು 34:18 - ಪರಿಶುದ್ದ ಬೈಬಲ್18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.