ಕೀರ್ತನೆಗಳು 34:19 - ಪರಿಶುದ್ದ ಬೈಬಲ್19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.