Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:21 - ಪರಿಶುದ್ದ ಬೈಬಲ್‌

21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:21
22 ತಿಳಿವುಗಳ ಹೋಲಿಕೆ  

ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು.


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ರಾಜನಾದ ಅಹಾಬನು ಈ ರೀತಿಯಲ್ಲಿ ಸತ್ತುಹೋದನು. ಅವನ ದೇಹವನ್ನು ಕೆಲವು ಜನರು ಸಮಾರ್ಯಕ್ಕೆ ತೆಗೆದುಕೊಂಡು ಹೋದರು. ಅವರು ಅವನನ್ನು ಅಲ್ಲಿ ಸಮಾಧಿಮಾಡಿದರು.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು