ಕೀರ್ತನೆಗಳು 34:8 - ಪರಿಶುದ್ದ ಬೈಬಲ್8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.