Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:10 - ಪರಿಶುದ್ದ ಬೈಬಲ್‌

10 ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:10
31 ತಿಳಿವುಗಳ ಹೋಲಿಕೆ  

ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಯಾಕೆಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.


ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!


ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.


ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.


ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.”


ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?


ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.


ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.


ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.


ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.


ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.


ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.


ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು