ಕೀರ್ತನೆಗಳು 35:13 - ಪರಿಶುದ್ದ ಬೈಬಲ್13 ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿ |
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.