ಕೀರ್ತನೆಗಳು 35:15 - ಪರಿಶುದ್ದ ಬೈಬಲ್15 ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ; ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೂ ನನಗೆ ಆಪತ್ತು ಬಂದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಅಕಾರಣವಾಗಿ ಈ ಭ್ರಷ್ಟರು ನನಗೆ ವಿರೋಧವಾಗಿ ಕೂಡಿಕೊಂಡು ಸೂರೆಮಾಡುವದನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.