Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:16 - ಪರಿಶುದ್ದ ಬೈಬಲ್‌

16 ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:16
8 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


“ದೇವರು ಕೋಪದಿಂದ ನನ್ನ ದೇಹವನ್ನು ಸೀಳಿಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ; ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.


ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು