ಕೀರ್ತನೆಗಳು 35:26 - ಪರಿಶುದ್ದ ಬೈಬಲ್26 ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.