ಕೀರ್ತನೆಗಳು 35:4 - ಪರಿಶುದ್ದ ಬೈಬಲ್4 ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.