ಕೀರ್ತನೆಗಳು 35:8 - ಪರಿಶುದ್ದ ಬೈಬಲ್8 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.