ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.