ಕೀರ್ತನೆಗಳು 36:1 - ಪರಿಶುದ್ದ ಬೈಬಲ್1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.