Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:4 - ಪರಿಶುದ್ದ ಬೈಬಲ್‌

4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:4
24 ತಿಳಿವುಗಳ ಹೋಲಿಕೆ  

ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.


ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?


ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ


ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.


ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು