ಕೀರ್ತನೆಗಳು 36:6 - ಪರಿಶುದ್ದ ಬೈಬಲ್6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿ |
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.