Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:10 - ಪರಿಶುದ್ದ ಬೈಬಲ್‌

10 ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:10
25 ತಿಳಿವುಗಳ ಹೋಲಿಕೆ  

ದುಷ್ಟರು ಸ್ವಲ್ಪಕಾಲ ಅಭಿವೃದ್ಧಿಗೊಂಡರೂ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಎಲ್ಲರಂತೆ ಇಲ್ಲವಾಗುವರು.’


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು.


ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.


ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.


ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ


ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು