ಕೀರ್ತನೆಗಳು 37:14 - ಪರಿಶುದ್ದ ಬೈಬಲ್14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ. ಅಧ್ಯಾಯವನ್ನು ನೋಡಿ |
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.