ಕೀರ್ತನೆಗಳು 37:20 - ಪರಿಶುದ್ದ ಬೈಬಲ್20 ದುಷ್ಟರಾದರೋ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗೆ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು. ಅಧ್ಯಾಯವನ್ನು ನೋಡಿ |