Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:24 - ಪರಿಶುದ್ದ ಬೈಬಲ್‌

24 ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:24
13 ತಿಳಿವುಗಳ ಹೋಲಿಕೆ  

ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.


ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.


ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


ಯಾಕೆಂದರೆ ದುಷ್ಟರು ನಾಶವಾಗುವರು. ನೀತಿವಂತರನ್ನಾದರೋ ಯೆಹೋವನು ಪರಿಪಾಲಿಸುವನು.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು.


ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು