Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:27 - ಪರಿಶುದ್ದ ಬೈಬಲ್‌

27 ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ [ದೇಶದಲ್ಲಿ] ವಾಸವಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು, ಆಗ ಯುಗಯುಗಕ್ಕೂ ನಾಡಿನಲ್ಲಿ ವಾಸಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:27
15 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು