ಕೀರ್ತನೆಗಳು 37:28 - ಪರಿಶುದ್ದ ಬೈಬಲ್28 ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು. ಅಧ್ಯಾಯವನ್ನು ನೋಡಿ |
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.