ಕೀರ್ತನೆಗಳು 37:34 - ಪರಿಶುದ್ದ ಬೈಬಲ್34 ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”