ಕೀರ್ತನೆಗಳು 37:7 - ಪರಿಶುದ್ದ ಬೈಬಲ್7 ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.