Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:10 - ಪರಿಶುದ್ದ ಬೈಬಲ್‌

10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಗುಂಡಿಗೆ ಬಡುಕೊಳ್ಳುತ್ತದೆ; ನನ್ನ ಚೈತನ್ಯವು ಕುಗ್ಗಿಹೋಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:10
12 ತಿಳಿವುಗಳ ಹೋಲಿಕೆ  

ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.


ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!


ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.


ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.


ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.


ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.


ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು