Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:7 - ಪರಿಶುದ್ದ ಬೈಬಲ್‌

7 ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಉರಿಬಡಿದಂತಿದೆ ಎನ್ನ ಸೊಂಟಕೆ I ಆರೋಗ್ಯವಿಲ್ಲದಿದೆ ದೇಹಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:7
7 ತಿಳಿವುಗಳ ಹೋಲಿಕೆ  

ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.


“ಅವನು ಯಾವುದೋ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ.


ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿಹೋಗಿದೆ.


ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು