Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:8 - ಪರಿಶುದ್ದ ಬೈಬಲ್‌

8 ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:8
6 ತಿಳಿವುಗಳ ಹೋಲಿಕೆ  

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.


ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಾಳಾಟವು ಜಲಧಾರೆಯಂತಿದೆ.


ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.


ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ನನ್ನ ಅಂತರಂಗವು ಕುದಿಯುತ್ತಿದೆ; ಸಂಕಟವು ನಿಲ್ಲುತ್ತಲೇ ಇಲ್ಲ. ಸಂಕಟವು ಈಗ ತಾನೆ ಆರಂಭಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು