ಕೀರ್ತನೆಗಳು 39:3 - ಪರಿಶುದ್ದ ಬೈಬಲ್3 ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯುರಿಯಿತು. ಆಗ ನಾನು ಬಾಯಿಬಿಟ್ಟು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಹೃದಯವು ಸಂತಾಪದಿಂದ ಕಾವೇರಿತು. ನಾನು ಧ್ಯಾನವು ಬೆಂಕಿಯಂತೆ ಉರಿಯಿತು. ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು: ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.