ಕೀರ್ತನೆಗಳು 39:6 - ಪರಿಶುದ್ದ ಬೈಬಲ್6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.