ಕೀರ್ತನೆಗಳು 39:7 - ಪರಿಶುದ್ದ ಬೈಬಲ್7 ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲಾಗಿ ಕರ್ತನೇ, ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.