ಕೀರ್ತನೆಗಳು 40:12 - ಪರಿಶುದ್ದ ಬೈಬಲ್12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ. ಅಧ್ಯಾಯವನ್ನು ನೋಡಿ |