Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:14 - ಪರಿಶುದ್ದ ಬೈಬಲ್‌

14 ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಪ್ರಾಣವನ್ನು ತೆಗೆಯುವದಕ್ಕೆ ಸಮಯ ನೋಡುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:14
16 ತಿಳಿವುಗಳ ಹೋಲಿಕೆ  

ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.


ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.


ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. ಆದರೆ ಅವರು ಬಿದ್ದು ನಾಶವಾದರು.


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.


ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು