ಕೀರ್ತನೆಗಳು 40:16 - ಪರಿಶುದ್ದ ಬೈಬಲ್16 ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು ಯೆಹೋವನಿಗೆ ಸ್ತೋತ್ರವೆಂದು ಯಾವಾಗಲೂ ಹೇಳುವವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ; ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ಯೆಹೋವ ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ. ಅಧ್ಯಾಯವನ್ನು ನೋಡಿ |