ಕೀರ್ತನೆಗಳು 40:3 - ಪರಿಶುದ್ದ ಬೈಬಲ್3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು. ಅಧ್ಯಾಯವನ್ನು ನೋಡಿ |