ಕೀರ್ತನೆಗಳು 40:6 - ಪರಿಶುದ್ದ ಬೈಬಲ್6 ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.