ಕೀರ್ತನೆಗಳು 41:13 - ಪರಿಶುದ್ದ ಬೈಬಲ್13 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.