Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:4 - ಪರಿಶುದ್ದ ಬೈಬಲ್‌

4 ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನಂತು, “ಪ್ರಭೂ ಕರುಣಿಸು, ಗುಣಪಡಿಸೆನ್ನನು I ನಿನಗೆ ವಿರುದ್ಧ ಪಾಪಗೈದೆ” ಎಂದು ಬೇಡುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:4
8 ತಿಳಿವುಗಳ ಹೋಲಿಕೆ  

ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು