ಕೀರ್ತನೆಗಳು 41:6 - ಪರಿಶುದ್ದ ಬೈಬಲ್6 ನನ್ನನ್ನು ನೋಡಲು ಬಂದವರು ಕಪಟದ ಮಾತನ್ನಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರಲ್ಲೊಬ್ಬನು ನನ್ನನ್ನು ನೋಡುವದಕ್ಕೆ ಬಂದರೆ ಕಪಟದ ಮಾತನ್ನಾಡುವನು; ಮನಸ್ಸಿನಲ್ಲಿ ಅಶುಭಗಳನ್ನು ಸಂಗ್ರಹಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.