Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:10 - ಪರಿಶುದ್ದ ಬೈಬಲ್‌

10 ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:10
8 ತಿಳಿವುಗಳ ಹೋಲಿಕೆ  

“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ.


ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು