ಕೀರ್ತನೆಗಳು 42:4 - ಪರಿಶುದ್ದ ಬೈಬಲ್4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.