ಕೀರ್ತನೆಗಳು 42:7 - ಪರಿಶುದ್ದ ಬೈಬಲ್7 ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ. ಅಧ್ಯಾಯವನ್ನು ನೋಡಿ |