4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”