ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.