ಕೀರ್ತನೆಗಳು 44:10 - ಪರಿಶುದ್ದ ಬೈಬಲ್10 ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶತ್ರುಗಳಿಗೆ ಬೆಂಗೊಟ್ಟು ನಾವೋಡುವಂತೆ ಮಾಡಿರುವೆ I ಹಗೆಗಳು ಹಾಯಾಗಿ ಸೊತ್ತನು ಸೂರೆಮಾಡ ಬಿಟ್ಟಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದ್ದೀ; ವೈರಿಗಳು ನಮ್ಮ ಸೊತ್ತನ್ನು ಬೇಕಾದ ಹಾಗೆ ಸೂರೆಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ. ಅಧ್ಯಾಯವನ್ನು ನೋಡಿ |
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”