ಕೀರ್ತನೆಗಳು 44:12 - ಪರಿಶುದ್ದ ಬೈಬಲ್12 ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.