ಕೀರ್ತನೆಗಳು 44:14 - ಪರಿಶುದ್ದ ಬೈಬಲ್14 ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”