Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:18 - ಪರಿಶುದ್ದ ಬೈಬಲ್‌

18 ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮ್ಮಂತರಂಗ ದೂರವಾಗಿಲ್ಲ ನಿನ್ನಿಂದ I ನಾವು ಅಗಲಲಿಲ್ಲ ನೀನು ತೋರಿದ ಮಾರ್ಗದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿಮ್ಮ ಹಾದಿಯಿಂದ ತೊಲಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:18
12 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.


ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಲೋಟನ ಹೆಂಡತಿಗೆ ಸಂಭವಿಸಿದ್ದು ಜ್ಞಾಪಕವಿದೆಯೇ?


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು